ನಂದಿನಿ ಮೈಸೂರು
ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇಂದು ಧ್ರುವ ನಾರಾಯಣ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ಧ್ರುವ ನಾರಾಯಣ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ,
ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ಅವರು ಜೊತೆಗಿದ್ದರು.