ಬೆಂಗಳೂರು:3 ಸೆಪ್ಟೆಂಬರ್ 2021
ನ@ದಿನಿ
ಕೋರೋನಾ ಕರಿನೆರಳು ಹಿನ್ನಲೆ ಈ ಬಾರಿಯೂ
ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2021 ಸರಳ ಸಾಂಪ್ರದಾಯಿಕವಾಗಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ
ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ “ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರ ನೇತೃತ್ವದಲ್ಲಿ ನಾಡ ಹಬ್ಬ ಮೈಸೂರು ದಸರಾ -2021 ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಿತು.ನಂತರ ಮಾತನಾಡಿದ ಬೊಮ್ಮಾಯಿರವರು ಅ.7 ರಿಮನದ
ಅಕ್ಟೋಬರ್ 15 ರವರಗೆ 9 ದಿನಗಳ ಕಾಲ ನಡೆಯಲಿದೆ.ಕೋರೋನಾ ಮೂರನೇ ಅಲೆ ಹಿನ್ನಲೆ ಕಳೆದ ಬಾರಿಯಂತೆ ಸರಳ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವ ನಡೆಯಲಿದೆ ಎಂದರು.
ಸಭೆಯಲ್ಲಿ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ತನ್ವೀರ್ ಸೇಠ್,ಮೇಯರ್ ಸುನಂದ ಪಾಲನೇತ್ರ,ಆಯುಕ್ತ ಡಾ.ಚಂದ್ರಗುಪ್ತ ಸೇರಿದಂತೆ ಮತ್ತಿತರ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.