ಸರಳ ದಸರಾ ಆಚರಣೆಗೆ ಚಿಂತನೆ ಎಸ್.ಟಿ.ಸೋಮಶೇಖರ್

ಮೈಸೂರು, ಆಗಸ್ಟ್ 7(ಕರ್ನಾಟಕ ವಾರ್ತೆ): ಕೊರೊನಾ ಹಿನ್ನೆಲೆಯಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಎಸ್.ಟಿ.ಸೋಮಶೇಖರ್ ಸಚಿವರು

ಹೆಚ್.ಟಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್‌ ಪರಿಶೀಲನೆ ವೇಳೆ ದಸರಾ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು,
ಸರಳ ದಸರ ಆಚರಣೆಗೆ ರೂಪರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ರೂಪರೇಷೆ ಸಿದ್ದವಾದ ನಂತರ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಕಳೆದ ವರ್ಷ ದಸರಾ ಆಚರಣೆಗೆ 10 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಆ ಪೈಕಿ 7.50 ಕೋಟಿ ಅನುದಾನ ಉಳಿದಿದೆ. ಈ ವರ್ಷದ ದಸರಾ ಆಚರಣೆಗೆ ಸರ್ಕಾರದ ಅನುಮೋದನೆ ಪಡೆದು ಆ ಉಳಿಕೆ ಅನುದಾನ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ಮೈಸೂರು ದಸರಾ ಮಹೋತ್ಸವವನ್ನು ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ. ಈ ವರ್ಷವೂ ದಸರಾ ಆಚರಣೆ ಮಾಡಲಾಗುತ್ತದೆ ಎಂದರು.

Leave a Reply

Your email address will not be published. Required fields are marked *