ಸುಲಿಕೆರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ & ಕಾಂಕ್ರಿಟ್ ಚರಂಡಿ ನಿರ್ಮಾಣ ಕಾಮಗಾರಿಗೆ ಎಸ್ ಟಿ ಎಸ್ ಚಾಲನೆ

 

ಬೆಂಗಳೂರು:11 ಆಗಸ್ಟ್ 2021

ನ@ದಿನಿ

ಯಶವಂತಪುರ ವಿಧಾನಸಭಾ ಕ್ಷೇತ್ರ ಸುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಮ್ಮಘಟ್ಟ ಬಸವೇಶ್ವರನಗರ, ಅರ್ಚಕರ ಕಾಲೋನಿ ಹಾಗೂ ಚೌಡೇಶ್ವರಿ ನಗರದಲ್ಲಿ ಅಂದಾಜುವೆಚ್ಚ ರೂ 75.00 ಲಕ್ಷಗಳಲ್ಲಿ ಕಾಂಕ್ರೀಟ್ ರಸ್ತೆ & ಕಾಂಕ್ರಿಟ್ ಚರಂಡಿ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಸಹಾಕಾರಿ ಸಚಿವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ
ಎಸ್ ಟಿ ಸೋಮಶೇಖರ್ ರವರು
ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಬಿಎಂಪಿ ಕಸದ ಘಟಕದ ಸುತ್ತ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿ ವ್ಯಾಪ್ತಿಯಲ್ಲಿ ಅಂದಾಜು ವೆಚ್ಚ 5.00 ಕೋಟಿಗಳಲ್ಲಿ ಹೊನಗನಹಟ್ಟಿ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಕುರುಬರಹಳ್ಳಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಚನ್ನೇನಹಳ್ಳಿ ಜನಸೇವಾ ವಿದ್ಯಾ ಕೇಂದ್ರಕ್ಕೆ ಭೇಟಿ ಕೊಟ್ಟು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಎ ಎಸ್ ನಿರ್ಮಲ್ ಕುಮಾರ್ ಜಿರವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಾಜಿ ಜಿಲ್ಲಾ ಪಂಚಾಯಿತಿ & ತಾಲೂಕು ಪಂಚಾಯಿತಿ ಸದಸ್ಯರುಗಳು, ಮುಖಂಡರುಗಳು, ಕಾರ್ಯಕರ್ತರು,ಸಾರ್ವಜನಿಕರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *