158 Views
ಮೈಸೂರು:28 ಆಗಸ್ಟ್ 2021
ನ@ದಿನಿ
ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2021 ಪೂರ್ವಭಾವಿ ಸಭೆ ಸೆ.3 ರಂದು ನಡೆಯಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಸೆ.3 ರಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ “ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರ ನೇತೃತ್ವದಲ್ಲಿ ನಾಡ ಹಬ್ಬ ಮೈಸೂರು ದಸರಾ -2021 ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಲಿದೆ.
ದಸರಾ ಮಹೋತ್ಸವಕ್ಕೆ ಇನ್ನೂ 48 ದಿನಗಳು ಬಾಕಿ ಇದೆ.ಅಕ್ಟೋಬರ್ 15 ರಂದು ಜಂಜೂ ಸವಾರಿ ನಡೆಯಲಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್,ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಪ್ರತಾಪ್ ಸಿಂಹ,ಶಾಸಕರು,ಮೇಯರ್ ಸುನಂದ ಪಾಲನೇತ್ರ,
,ಜನಪ್ರತಿನಿಧಿಗಳು,ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್,ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್ಪಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.