ಯೋಗ ಒಲಂಪಿಯಾಡ್‌ನಲ್ಲಿ ಪ್ರಥಮ ಸ್ಥಾನ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಪವನ್ ಕೆ.

ನಂದಿನಿ ಮನುಪ್ರಸಾದ್ ನಾಯಕ್

 

ಯೋಗ ಒಲಂಪಿಯಾಡ್‌ನಲ್ಲಿ ಪ್ರಥಮ ಸ್ಥಾನ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಪವನ್ ಕೆ.


2026-27ನೇ ಸಾಲಿನ ಮೈಸೂರು ಜಿಲ್ಲಾಮಟ್ಟದ ಶಾಲಾ ಕ್ರೀಡಾ ಸ್ಪರ್ಧೆಗಳ ಅಂಗವಾಗಿ, ದಿನಾಂಕ 05.11.2026ರಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಆಯೋಜಿಸಲಾಗಿದ್ದ ಯೋಗ ಒಲಂಪಿಯಾಡ್ ಸ್ಪರ್ಧೆಯಲ್ಲಿ ಮೈಸೂರಿನ ಕುವೆಂಪು ನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಪವನ್ ಕೆ. ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಯು ಶಾಲೆಗೆ ಹಾಗೂ ಮೈಸೂರಿಗೆ ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಯ ಪರಿಶ್ರಮ, ಶಿಸ್ತು ಮತ್ತು ಯೋಗಾಭ್ಯಾಸದ ಮೇಲಿನ ಆಸಕ್ತಿಗೆ ಸಂದ ಗೌರವವಾಗಿದೆ.
ವಿದ್ಯಾರ್ಥಿಯ ಸಾಧನೆಯನ್ನು ಶ್ಲಾಘಿಸಿ, ಕೃಷ್ಣರಾಜ ಕ್ಷೇತ್ರದ ಶಾಸಕರು ಹಾಗೂ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ ಶ್ರೀ ಟಿ.ಎಸ್. ಶ್ರೀವತ್ಸ ಅವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸುವಂತೆ ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಕೃಷ್ಣ, ಶಾಲೆಯ ಪ್ರಾಂಶುಪಾಲರಾದ ಶ್ರೀ ಗುಬ್ಬಿಗೂಡು ರಮೇಶ್, ಉಪಪ್ರಾಂಶುಪಾಲರಾದ ಭಾಗ್ಯ, ಮುಖ್ಯ ಶಿಕ್ಷಕರಾದ ಹೇಮಾವತಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದು, ವಿದ್ಯಾರ್ಥಿಯ ಸಾಧನೆಯನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *