ನಂದಿನಿ ಮೈಸೂರು
ಮೈಸೂರು: ಬಿಜೆಪಿ ಸರ್ಕಾರ ಎಸ್ ಸಿ, ಎಸ್ ಟಿ ಸಮುದಾಯಗಳ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸುವ ಮೂಲಕ ಅವರಿಗೆ ಬಹಳ ಅನುಕೂಲಗಳನ್ನು ಕಲ್ಪಿಸಿಕೊಟ್ಟಿದೆ ಎಂದು ಮೈಸೂರು ನಗರ ಪಾಲಿಕೆಯ ಮೇಯರ್ ಶಿವಕುಮಾರ್ ತಿಳಿಸಿದರು.
ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ ಹಾಗೂ ಪರಿವಾರವನ್ನು ಎಸ್ಟಿಗೆ ಸೇರಿಸಬೇಕೆಂದು ಬಹು ವರ್ಷಗಳ ಬೇಡಿಕೆಯಾಗಿತ್ತು. ಇದನ್ನು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಈಡೇರಿಸಿಕೊಟ್ಟು, ಬಹು ವರ್ಷಗಳ ಸಂಕಷ್ಟದ ಸ್ಥಿತಿಯನ್ನು ನಿವಾರಿಸಿದೆ. ಮುಖ್ಯಮಂತ್ರಿ ಆಗಿದ್ದ ಬಿ ಎಸ್ ಯಡಿಯೂರಪ್ಪ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ವಾಲ್ಮೀಕಿ ಜಯಂತಿಯನ್ನು ಆಚರಣೆಗೆ ತಂದರು. ವಾಲ್ಮೀಕಿ ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮೂಲಕ ಈ ಸಮುದಾಯವರು ಸಮಾಜದ ಮುಖ್ಯ ವಾಹಿನಿಗೆ ಬರಲು ಅನುಕೂಲ ಮಾಡಿಕೊಟ್ಟರು. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಇದ್ದ ಮೀಸಲಾತಿ ಯನ್ನು ಶೇಕಡ ಮೂರರಿಂದ 7ಕ್ಕೆ ಹೆಚ್ಚಿಸುವ ಮೂಲಕ ಈ ಸಮುದಾಯಕ್ಕೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅನುಕೂಲಗಳನ್ನು ಮಾಡಿಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಎಸ್ಸಿ-ಎಸ್‌ಟಿ ಸಮುದಾಯಗಳೊಂದಿಗೆ ಬಹಳ ಗೌರವ, ಆತ್ಮೀಯತೆಯನ್ನು ಇಟ್ಟುಕೊಂಡಿದೆ ಆತ್ಮಿತೆಯಿಂದ ಕೆಲಸ ಮಾಡುತ್ತಿದೆ.ಮೈಸೂರು ನಗರ ಪಾಲಿಕೆಯಲ್ಲಿ ಪೌರಕಾರ್ಮಿಕರಿಗೆ ಬೆಳಗಿನ ಹೊತ್ತು ತಿಂಡಿ ನೀಡುವ ವ್ಯವಸ್ಥೆಯನ್ನು ಜಾರಿಗೆಗೊಳಿಸಲಾಗಿತ್ತು. ಆದರೆ ಗುಣಮಟ್ಟದ ಉಪಹಾರ ನೀಡಲಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಉಪಹಾರದ ಹಣವನ್ನು ನೀಡುವಂತೆ ಬೇಡಿಕೆಯನ್ನು ಇಟ್ಟಿದ್ದರು ಅದರಂತೆ ಹಣವನ್ನು ಪೌರಕಾರ್ಮಿಕರಿಗೆ ನೀಡಲಾಗುತ್ತಿದೆ. ಪೌರಕಾರ್ಮಿಕರಿಗೆ ಗುಣಮಟ್ಟದ ಉಪಹಾರವನ್ನು ನೀಡುವ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಲಾಗುತ್ತಿದೆ.ಇದಕ್ಕಾಗಿ ಈಗಾಗಲೇ ಟೆಂಡರನ್ನು ಕರೆಯಲಾಗಿದೆ.ವಿಧಾನಸಭೆ ಚುನಾವಣೆ ಮುಗಿದ ಬಳಿಕ ಬಜೆಟ್ ಮಂಡಿಸಲಿದ್ದು, ಅದರಲ್ಲಿ ಪೌರಕಾರ್ಮಿಕರಿಗೆ ಎಲೆಕ್ಟ್ರಾನಿಕ್ ವಾಹನಗಳನ್ನು ನೀಡುವುದಕ್ಕೆ ಹಣವನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು. ಬಿಜೆಪಿ ಎಲ್ಲಾ ಸಮುದಾಯದೊಂದಿಗೆ ಯಾವ ರೀತಿ ಆತ್ಮೀಯತೆಯನ್ನು ಹೊಂದಿದೆ ಎಂಬುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪೌರಕಾರ್ಮಿಕರ ಪಾದವನ್ನು ತೊಳೆದು ಪೂಜೆ ಮಾಡಿರುವುದೇ ಸಾಕ್ಷಿಯಾಗಿದೆ. ಕೋವಿಡ್ ವೇಳೆಯಲ್ಲಿ ಕೆಲಸ ನಿಲ್ಲಿಸುತ್ತಿದ್ದಾಗ ಮೃತಪಟ್ಟ ಪೌರಕಾರ್ಮಿಕರ ಕುಟುಂಬಗಳಿಗೆ 40ಲಕ್ಷ ರೂ ಪರಿಹಾರವನ್ನು ನೀಡಿದ್ದಾರೆ. ಯಾವ ಸರ್ಕಾರ ಕೂಡ ಇಷ್ಟೊಂದು ದೊಡ್ಡಮತದ ಪರಿಹಾರವನ್ನು ನೀಡಿರಲಿಲ್ಲ. ಬಿಜೆಪಿ ಸರ್ಕಾರ ಕಾರ್ಮಿಕರ ಬದುಕನ್ನು ಉತ್ತಮಗೊಳಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಶ್ರಮಿಸುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಸೋಮಶೇಖರ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಬಿಜೆಪಿ ಜಿಲ್ಲಾ ಸಹ ವಕ್ತಾರ ಡಾ.ಕೆ.ವಸಂತ್ ಕುಮಾರ್, ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದ ಸಂಯೋಜಕ ನಾಗೇಶ್ ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್ ಉಪಸ್ಥಿತರಿದ್ದರು.