ನಂದಿನಿ ಮನುಪ್ರಸಾದ್ ನಾಯಕ್
ಇಡಿ ಛೂ ಬಿಟ್ಟಿದ್ದ ಬಿಜೆಪಿಗೆ ಸುಪ್ರೀಂ ಕಪಾಳಮೋಕ್ಷ ಮಾಡಿದೆ: ಬಿ ಸುಬ್ರಹ್ಮಣ್ಯ
ಮೈಸೂರು: ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಜಾರಿ ನಿರ್ದೇಶನಾಲಯದ ಮೇಲ್ಮನವಿಯನ್ನ ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಇದರಿಂದ ಬಿಜೆಪಿಗೆ ಕಪಾಳ ಮೋಕ್ಷ ಆದಂತಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಕುಟುಕಿದ್ದಾರೆ.
ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನ ನಾವೆಲ್ಲರೂ ಸ್ವಾಗತಿಸುತ್ತೇವೆ. ಮುಖ್ಯಮಂತ್ರಿಗಳ ಪತ್ನಿ ಯಾವುದೇ ರಾಜಕೀಯ ವೇದಿಕೆಯಲ್ಲಿ ಕಾಣಿಸಿಕೊಂಡವರಲ್ಲ. ಪ್ರಚಾರಕ್ಕೂ ಬಂದವರಲ್ಲ. ಆದಾಗ್ಯೂ ಕಾನೂನಿನ ಅನ್ವಯ ಪಡೆದಿದ್ದ 14 ಸೈಟುಗಳನ್ನು ಹಿಂದಿರುಗಿಸಿ ಘನತೆ ಮೆರೆದಿದ್ದರು. ಆದ್ರೆ ವಿಪಕ್ಷಗಳ ಕುತಂತ್ರ ಅವರನ್ನು ಜೈಲಿಗೆ ಕಳಿಸುವುದಾಗಿತ್ತು. ಜೊತೆಗೆ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯುವ ಹುನ್ನಾರವೂ ನಡೆದಿತ್ತು. ಇದೀಗ ನ್ಯಾಯ ದೇವತೆಯೇ ಬಿಜೆಪಿಗೆ ತಪರಾಕಿ ಬಾರಿಸಿದೆ.
ಬಿಜೆಪಿಯವರು ಹಿಂದುಳಿದ ವರ್ಗದ ನಾಯಕ ಅನ್ನೋ ಕಾರಣಕ್ಕೆ ಷಡ್ಯಂತ್ರ ಮಾಡಿದ್ರು. ರಾಜಕೀಯವಾಗಿ ಸಿದ್ದರಾಮಯ್ಯರನ್ನ ಎದುರಿಸಲಾಗದೇ ಇಡಿಯನ್ನ ದುರ್ಬಳಕೆ ಮಾಡಿಕೊಂಡು, ಪಾರ್ವತಿ ಅವರ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ಮಾನಸಿಕವಾಗಿಯೂ ಕಿರುಕುಳ ನೀಡಿದ್ದರು. ಸುಪ್ರೀಂ ಆದೇಶದಿಂದ ವಿರೋಧಿಗಳಿಗೆ ಮುಖಭಂಗವಾಗಿದೆ. ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಇನ್ನಾದರೂ ಬಿಜೆಪಿಯವರು ವೈಯಕ್ತಿಕ, ದ್ವೇಷ ರಾಜಕಾರಣ ಬಿಟ್ಟು, ಆಡಳಿತ ವಿಚಾರದಲ್ಲಿ ಚರ್ಚೆ ಮಾಡಲಿ ಎಂದು ತಿಳಿವಳಿಕೆ ನೀಡಿದ್ದಾರೆ.
ಇನ್ನೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿರುದ್ಧವೂ ಹೂಡಲಾದ ಹಣ ವರ್ಗಾವಣೆ ಪ್ರಕರಣವನ್ನು ನ್ಯಾಯಾಲಯ ರದ್ದು ಪಡಿಸಿರುವುದನ್ನು ಸ್ವಾಗತಿಸುತ್ತೇವೆ
ಬಿ ಸುಬ್ರಹ್ಮಣ್ಯ
ಮಾಜಿ ಅಧ್ಯಕ್ಷರು ಕರ್ನಾಟಕ ಪ್ರದೇಶ ಕುರುಬರ ಸಂಘ
9845394933