ಸತ್ಯಕ್ಕೆ ಜಯ ಸಿಕ್ಕಿದೆ ಸಿಎಂ, ಪತ್ನಿ ಪಾರ್ವತಿ ಕಳಂಕ ಮುಕ್ತ – ಕೋರ್ಟ್ ನಿರ್ಧಾರ ಸ್ವಾಗತಿಸಿದ ಸುಬ್ರಹ್ಮಣ್ಯ

ನಂದಿನಿ ಮನುಪ್ರಸಾದ್ ನಾಯಕ್

 

*ಸತ್ಯಕ್ಕೆ ಜಯ ಸಿಕ್ಕಿದೆ ಸಿಎಂ, ಪತ್ನಿ ಪಾರ್ವತಿ ಕಳಂಕ ಮುಕ್ತ – ಕೋರ್ಟ್ ನಿರ್ಧಾರ ಸ್ವಾಗತಿಸಿದ ಸುಬ್ರಹ್ಮಣ್ಯ*

ಮೈಸೂರು: ಮುಡಾ ನಿವೇಶನಗಳ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರು ಕಳಂಕಮುಕ್ತರಾಗಿದ್ದು, ಸತ್ಯಕ್ಕೆ ಜಯ ಸಿಕ್ಕಂತಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಶ್ಲಾಘಿಸಿದ್ದಾರೆ.

ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ಧಾರವನ್ನ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ಹೆಸರಿಗೆ ಮಸಿ ಬಳಿಯಬೇಕು ಅಂತ ಕಾಣದ ಕೈಗಳು ಹಾಗೂ ವಿಪಕ್ಷಗಳು ಇಲ್ಲಸಲ್ಲದ ಷಡ್ಯಂತ್ರ ನಡೆಸಿದವು. ಮುಖ್ಯಮಂತ್ರಿಗಳನ್ನ ಜೈಲಿಗೆ ಕಳಿಸಬೇಕೆಂದು ವ್ಯವಸ್ಥಿತ ಪಿತೂರಿ ನಡೆಸಿದ್ರು, ಇಡಿಯನ್ನೂ ಛೂ ಬಿಟ್ಟರು. ಸುಳ್ಳೇ ಸತ್ಯವೆಂದು ಪಾದಯಾತ್ರೆ ಮಾಡಿ ಜನರಿಗೆ ಮಕ್ಮೇಲ್ ಟೋಪಿ ಹಾಕಿದ್ರು, ಈಗ ನ್ಯಾಯಾಲಯದ ಆದೇಶ ವಿಪಕ್ಷಗಳಿಗೆ ಕಪಾಳ ಮೋಕ್ಷ ಮಾಡಿದಂತಾಗಿದೆ.

ಮುಖ್ಯಮಂತ್ರಿಗಳ ಪತ್ನಿ ಯಾವುದೇ ರಾಜಕೀಯ ವೇದಿಕೆಯಲ್ಲಿ ಕಾಣಿಸಿಕೊಂಡವರಲ್ಲ. ಪ್ರಚಾರಕ್ಕೂ ಬಂದವರಲ್ಲ. ಆದಾಗ್ಯೂ ಕಾನೂನಿನ ಅನ್ವಯ ಪಡೆದಿದ್ದ 14 ಸೈಟುಗಳನ್ನು ಹಿಂದಿರುಗಿಸಿ ಘನತೆ ಮೆರೆದಿದ್ದರು. ಆದ್ರೆ ವಿಪಕ್ಷಗಳ ಕುತಂತ್ರ ಅವರನ್ನು ಜೈಲಿಗೆ ಕಳಿಸುವುದಾಗಿತ್ತು. ಜೊತೆಗೆ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯುವ ಹುನ್ನಾರವೂ ನಡೆದಿತ್ತು. ಇದೀಗ ನ್ಯಾಯ ದೇವತೆಯೇ ಬಿಜೆಪಿಗೆ ತಪರಾಕಿ ಬಾರಿಸಿದೆ.

ಬಿಜೆಪಿಯವರು ಹಿಂದುಳಿದ ವರ್ಗದ ನಾಯಕ ಅನ್ನೋ ಕಾರಣಕ್ಕೆ ಷಡ್ಯಂತ್ರ ಮಾಡಿದ್ರು. ರಾಜಕೀಯವಾಗಿ ಸಿದ್ದರಾಮಯ್ಯರನ್ನ ಎದುರಿಸಲಾಗದೇ ಇಡಿಯನ್ನ ದುರ್ಬಳಕೆ ಮಾಡಿಕೊಂಡು, ಪಾರ್ವತಿ ಅವರ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ಮಾನಸಿಕವಾಗಿಯೂ ಕಿರುಕುಳ ನೀಡಿದ್ದರು. ಈ ಮೊದಲು ಸುಪ್ರೀಂ ಆದೇಶ ಈಗ ಜನಪ್ರತಿನಿಧಿಗಳ ನಿರ್ಧಾರದಿಂದ ವಿರೋಧಿಗಳಿಗೆ ಮುಖಭಂಗವಾಗಿದೆ.

ಕಳೆದ 10-12 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಇನ್ನಾದರೂ ಬಿಜೆಪಿಯವರು ವೈಯಕ್ತಿಕ, ದ್ವೇಷ ರಾಜಕಾರಣ ಬಿಟ್ಟು, ಆಡಳಿತ ವಿಚಾರದಲ್ಲಿ ಚರ್ಚೆ ಮಾಡಲಿ ಎಂದು ತಿಳಿವಳಿಕೆ ನೀಡಿದ್ದಾರೆ.

ಬಿ ಸುಬ್ರಹ್ಮಣ್ಯ
ಮಾಜಿ ಅಧ್ಯಕ್ಷರು ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರು
9845394933

Leave a Reply

Your email address will not be published. Required fields are marked *