ನಂದಿನಿ ಮೈಸೂರು
ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಎಂ.ಎಸ್ ಸೂರಜ್ ಹೆಗಡೆ ಹಿತೈಷಿಗಳು ಸಭೆ ಸೇರಿ ಎಐಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಎಸ್ ಸೂರಜ್ ಹೆಗಡೆ ರವರಿಗೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಟಿಕೇಟ್ ನೀಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಉಸ್ತುವಾರಿ ರವರಿಗೆ ಮನವಿ ಮಾಡಲು ತೀರ್ಮಾನಿಸಿ ಈಗಾಗಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಡಾ.ಎಚ್.ಸಿ. ಮಹಾದೇವಪ್ಪ ರವರಿಗೆ ಮತ್ತು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಉಸ್ತುವಾರಿ ಮಾನ್ಯ ಬೈರತಿ ಸುರೇಶ್ ರವರಿಗೆ ಮನವಿ ಪತ್ರ ನೀಡಿ ಎಂ.ಎನ್ . ಸೂರಜ್ ರವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಲಾಯಿತು.