ಡಿ.ದೇವರಾಜ ಅರಸು ರವರ ಮೊಮ್ಮಗ ಸೂರಜ್ ಹೆಗ್ಡೆ ರವರು ಹೃದಯಾಘಾತದಿಂದ ನಿಧನ

ನಂದಿನಿ ಮನುಪ್ರಸಾದ್ ನಾಯಕ್

 

ನಂದಿನಿ ಮನುಪ್ರಸಾದ್ ನಾಯಕ್


ಡಿ.ದೇವರಾಜ ಅರಸು ರವರ ಮೊಮ್ಮಗ ಸೂರಜ್ ಹೆಗ್ಡೆ ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ..

ಅವರಿಗೆ ಹೃದಯಾಘಾತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ.

ಸೂರಜ್ ಹೆಗ್ಡೆ ಅವರ ನಿಧನಕ್ಕೆ ಕುಟುಂಬಸ್ಥರು,ಸ್ನೇಹೀತರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ನಾಯಕರು ಶೋಕ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *