ಜ.18ರಿಂದ 23ವರಗೆ ಸುತ್ತೂರು ಜಾತ್ರಾ ಮಹೋತ್ಸವ,ಆಕರ್ಷಕ ಧನಗಳ ಜಾತ್ರೆ ರದ್ದು

ನಂದಿನಿ ಮೈಸೂರು

ಕಳೆದೆರೆಡು ವರ್ಷ ಕೊರೊನಾ ಹಾವಳಿ ಕಾರಣದಿಂದ ಸಾಂಪ್ರದಾಯಿಕವಾಗಿಯಷ್ಟೇ ಜಾತ್ರೆ ಜರುಗಿತ್ತು. ಆದರೆ ಈಗ ಸೋಂಕು ಮರೆಯಾಗಿರುವುದರಿಂದಾಗಿ ಜ. ೧೮ ರಿಂದ ಜ. ೨೩ವರಗೆ ಸುತ್ತೂರು ಜಾತ್ರಾ ಮಹೋತ್ಸವ
ಈ ಬಾರಿ ಅದ್ದೂರಿಯಾಗಿ ಜರುಗಲಿದೆ ಎಂದು ಜಾತ್ರಾ ಸಮಿತಿ ಕಾರ್ಯದರ್ಶಿ ಮಂಜುನಾಥ್ ಮಾಹಿತಿ ‌ನೀಡಿದರು.

ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ
6 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.
ಜ.18 ರಂದು ಆಕರ್ಷಕ ವಸ್ತು ಪ್ರದರ್ಶನ, ರೈತರಿಗಾಗಿ ಕೃಷಿ ಮೇಳ, ಸಿರಿಧಾನ್ಯ ಮತ್ತು ಸಾಂಸ್ಕೃತಿಕ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಂಗೋಲಿ, ಸೋಬಾನೆ ಪದ, ದೋಣಿ ವಿಹಾರಗಳ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮುರುಗೇಶ್ ನಿರಾಣಿ ಭಾಗಿಯಾಗಲಿದ್ದಾರೆ.

ಜ. 19ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.ನಂತರ
ಹಾಲ್ಹರವಿ ಉತ್ಸವ ನಡೆಯಲಿದೆ.

ಜ.20ರಂದು ರಥೋತ್ಸವ ಜರುಗಲಿದ್ದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ವಿ. ಜೋಷಿ ಉಪಸ್ಥಿತರಿರಲಿದ್ದಾರೆ. ದೇಸೀ ಆಟ, ಚಿತ್ರಕಲಾ ಸ್ಪರ್ಧೆ, ಗಾಳಿ ಪಟ ಸ್ಪರ್ಧೆ ಆದ್ಯಕ್ಷತೆಯನ್ನ ಮಾಜಿ ಮುಖ್ಯಮಂತ್ರಿ ವಹಿಸಲಿದ್ದಾರೆ.


ಜ.21ರಂದು ಶ್ರೀ ಮಹದೇಶ್ವರ ಕೊಂಡೋತ್ಸವ ಹಾಗೂ ಲಕ್ಷದೀಪೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ರಂದು ಕೃಷಿ ವಿಚಾರ ಸಂಕಿರಣ ನಡೆಯಲಿದ್ದು, ಸಿರಿಧಾನ್ಯಗಳ ಮಹತ್ವ ಈ ಬಾರಿಯ ವಿಷಯವಾಗಿದ್ದು ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ.

22ರಂದು ತೆಪ್ಪೋತ್ಸವಗಳ ಹಾಗೂ ಶ್ರೀ ವೀರಭದ್ರೇಶ್ವರ ಕೊಂಡೋತ್ಸವಗಳ ಜೊತೆಗೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾಚಟುವಟಿಕೆಗಳು ಜರುಗಲಿವೆ ಎಂದು ವಿವರಿಸಿದರು.

೨೨ ರಂದು ಭಜನಾ ಮೇಳ ಸಮಾರೋಪ, ಅಂದೇ ಕುಸ್ತಿ ಪಂದ್ಯಾವಳಿ, ೨೩ ರಂದು ಕೃಷಿ ಮೇಳ ಮತ್ತು ವಸ್ತು ಪ್ರದರ್ಶನ ಸಮಾರೋಪಗೊಳ್ಳಲಿವೆ.ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷೆತೆ ವಹಿಸಲಿದ್ದಾರೆ.

ಈ ನಡುವೆ ಜಾತ್ರೆಯ ಪ್ರಮುಖ ಆಕರ್ಷಣೆಯಾದ ವಸ್ತುಪ್ರದರ್ಶನದಲ್ಲಿ ಕೈಗಾರಿಕೋತ್ಪನ್ನಗಳು, ಕೈಮಗ್ಗ, ಜವಳಿ, ಕರಕುಶಲ ಉತ್ಪನ್ನಗಳು, ಗ್ರಾಮೀಣ ಉತ್ಪನ್ನಗಳು, ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ಗೃಹಬಳಕೆ ಉತ್ಪನ್ನಗಳು ಹಾಗೂ ಗುಡಿ ಕೈಗಾರಿಕೆ ವಸ್ತುಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಇರುತ್ತದೆ. ಜೆಎಸ್‌ಎಸ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸಿದ್ಧಪಡಿಸಿರುವ ೨೦೦ ಕ್ಕೂ ಹೆಚ್ಚು ಶಿಕ್ಷಣ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳಿರುತ್ತವೆ. ಸರ್ಕಾರದ ಅಭಿವೃದ್ಧಿ ಇಲಾಖೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಮಹಿಳಾ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ವೈದ್ಯಕೀಯ ಹಾಗೂ ತಾಂತ್ರಿಕ ವಸ್ತು ಪ್ರದರ್ಶನ ಇರಲಿವೆ.

ನಿತ್ಯ ಎರಡು ಲಕ್ಷ ಮಂದಿಗೆ ದಾಸೋಹ

ಈ ಆರೂ ದಿನಗಳ ಜಾತ್ರೆಯಲ್ಲಿ ಸುಮಾರು ೨೦ ಲಕ್ಷ ಮಂದಿ ಪಾಲ್ಗೊಳ್ಳಲಿದ್ದು, ನಿತ್ಯ ಎರಡೂವರೆ ಲಕ್ಷ ಮಂದಿಗೆ ಮೂತು ಬಾರಿ ಅನ್ನ ದಾಸೋಹವಿರಲಿದೆ. ಇದಕ್ಕಾಗಿ ಈಗಾಗಲೇ ಎರಡು ವರ್ಷ ಹಳೆಯ ಸಾವಿರ ಕ್ವಿಂಟಾಲ್ ಅಕ್ಕಿ ದಾಸ್ತಾನು ಮಾಡಲಾಗಿದೆ. ೨೦೦ ಕ್ವಿಂಟಾಲ್ ಬೇಳೆ, ೨೦ ರಿಂದ ೨೫ ಕ್ವಿಂಟಾಲ್ ಬೆಲ್ಲ, ೧೫೦೦ ಟಿನ್ ಎಣ್ಣೆ ಮೊದಲಾದವನ್ನು ದಾಸ್ತಾನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ದನಗಳ ಜಾತ್ರೆ ರದ್ದು

ದನಗಳ ಜಾತೆಯನ್ನ್ರು ಕಳೆದ ೫೩ ವರ್ಷಗಳಿಂದಲೂ ಏರ್ಪಡಿಸಲಾಗುತ್ತಿದೆ. ಉತ್ತಮ ರಾಸುಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿತ್ತು. ಆದರೆ ಈ ವರ್ಷ ಜಾನುವಾರುಗಳಲ್ಲಿ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲಾಧಿಕಾರಿಗಳ ಆದೇಶದಂತೆ ದನಗಳ ಜಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು.

ಜೆಎಸ್‌ಎಸ್ ಮಹಾ ವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರ್‌ಮಠ್, ಕಾರ್ಯದರ್ಶಿ ಶಿವಕುಮಾರಸ್ವಾಮಿ, ಪ್ರೊ. ಸುಬ್ಬಪ್ಪ, ಉದಯಶಂಕರ್ ಹಾಜರಿದ್ದರು.

Leave a Reply

Your email address will not be published. Required fields are marked *