ನಂದಿನಿ ಮೈಸೂರು
ನಂಜನಗೂಡು ತಾಲೂಕು ಸುತ್ತೂರಿನ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಶಾಲೆ ವಿದ್ಯಾರ್ಥಿಗಳು ಸ್ವತಂತ್ರ ಹೋರಾಟಗಾರರ ವೇಶಭೂಷಣ ತೊಟ್ಟು ಸಂಭ್ರಮಿಸಿದರು.
ದೇಶಭಕ್ತಿ ನೃತ್ಯ ಪ್ರದರ್ಶಿಸಿದರು. ಈ ಸ್ಪರ್ಧೆಯಲ್ಲಿ ಉತ್ತಮ ನೃತ್ಯ ಮಾಡಿದ ಹಾಗೂ ವೇಷ ಭೂಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಎಸ್ ಟಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು ಪೋಷಕರು ಶಾಲೆಯ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಗ್ರಾಮ ಪಂಚಾಯತಿ ಸದಸ್ಯರು ಹಾಜರಿದ್ದರು ಭಾಗವಹಿಸಿದ ಎಲ್ಲರಿಗೂ ಸಿಹಿ ವಿತರಿಸಲಾಯಿತು.