ಪಿರಿಯಾಪಟ್ಟಣ:13 ಆಗಸ್ಟ್ 2022
ಸತೀಶ್ ಆರಾಧ್ಯ / ನಂದಿನಿ ಮೈಸೂರು
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಟ್ಟದಪುರ ವಲಯ ಕಚೇರಿ ವತಿಯಿಂದ ತಾಲ್ಲೂಕಿನ ಬೆಕ್ಕರೆ ಗ್ರಾಮದ ಶ್ರೀ ಬಾಲಚಂದ್ರ ಬಸವೇಶ್ವರಸ್ವಾಮಿ ದೇವಾಲಯ ಆವರಣದಲ್ಲಿ ಸ್ವಸಹಾಯ ಸಂಘದ ಸದಸ್ಯರ ನೇತೃತ್ವ ಶ್ರದ್ಧಾ ಕೇಂದ್ರದ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.
ಬೆಟ್ಟದಪುರ ವಲಯ ಯೋಜನಾದಿಕಾರಿ ಸಂತೋಷ್ ಅವರು ಮಾತನಾಡಿ ಧಾರ್ಮಿಕ ಕೇಂದ್ರಗಳು ಸರ್ವಧರ್ಮ ಸಮನ್ವಯತೆ ಸಾರುವ ಸ್ಥಳಗಳಾಗಿದ್ದು ಸ್ವಸಹಾಯ ಸಂಘದ ಸದಸ್ಯರು ಒಟ್ಟಾಗಿ ಸೇರಿ ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛತೆ ಮಾಡುವ ಮೂಲಕ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ, ಪ್ರತಿ ವರ್ಷ ಸ್ವಾತಂತ್ರ್ಯ ದಿನ ಆಚರಣೆ ಅಂಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು.
ಈ ವೇಳೆ ಹರ್ ಘರ್ ತಿರಂಗ ಕಾರ್ಯಕ್ರಮ ಅಂಗವಾಗಿ ಸ್ವಸಹಾಯ ಸಂಘದ ಸದಸ್ಯರಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.
ಈ ಸಂದರ್ಭ ವಲಯ ಮೇಲ್ವಿಚಾರಕ ಮಂಜುನಾಥ್, ಸೇವಾ ಪ್ರತಿನಿಧಿ ಮಂಜುಳಾ, ಸದಸ್ಯರಾದ ರಮ್ಯಾ, ಮಾಲತಿ, ರುಕ್ಮಿಣಿ, ಭಾಗ್ಯ, ಲತಾ, ಮಣಿ, ಸುಕನ್ಯಾ, ದ್ರಾಕ್ಷಾಯಿಣಿ, ಮಣಿ ಇದ್ದರು.