ಹೆಚ್ ಡಿ ಕೋಟೆ:29 ಜನವರಿ 2022
ಇಂದು ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಐ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸಸಿ ನೆಡುವ, ಬಹುಮಾನ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಒಟ್ಟು 20 ಗಿಡಗಳನ್ನು ಕಾಲೇಜಿಗೆ ನೀಡಿದರು.
ಬಳಿಕ ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಡಾ.ಕುಮಾರ್ ಅವರು ಮಾತನಾಡಿ ಪ್ರಬುದ್ಧ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.
ಯೌವನ ವಯಸ್ಸಿನಲ್ಲಿಲ್ಲ ಮನಸ್ಸಿನಲ್ಲಿರುತ್ತದೆ ಆದ್ದರಿಂದ ಯುವಕರು ಯಾವಾಗಲೂ ಲವಲವಿಕೆಯಿಂದ ಜೀವನ ನಡೆಸಬೇಕು.ನಮ್ಮ ದೇಶದ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಜಾರಿಗೆ ಬಂದಿರುವಂತಹ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಯುವಕರಿಗೆ ಸಾಕಷ್ಟು ಅವಕಾಶಗಳು ಸಿಗುತ್ತವೆ. ಇವುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಲ್ಲಿ ಯುವ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ಬಳಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಉಷಾದೇವಿ ಅವರು ಮಾತನಾಡಿ ರೆಡ್ ಕ್ರಾಸ್ ಸಮಿತಿಯಿಂದ ಒಟ್ಟು 20 ಗಿಡಗಳನ್ನು ಬಹಳ ಜವಾಬ್ದಾರಿಯುತವಾಗಿ ಪೋಷಣೆ ಮಾಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಇದೇವೇಳೆ ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನ ಸಿಬ್ಬಂದಿಗಳಾದ ಸತೀಶ್ ಮೇತ್ರಿ, ಶಿವಲಿಂಗ್ ಹ್ಯಾಂಡ್ ಪೋಸ್ಟ್, ಸಿದ್ಧಾರ್ಥ, ಯುವ ರೆಡ್ ಕ್ರಾಸ್ ಸಂಚಾಲಕರಾದ ಡಾ.ಸವಿತಾ ಹಾಗೂ ಇನ್ನಿತರರು ಇದ್ದರು.
ಸಂಜಯ್ ಕೆ ಬೆಳತೂರು ಜೊತೆ ನಂದಿನಿ ಭಾರತ್ ನ್ಯೂಸ್ ಟಿವಿ ಮೈಸೂರು