ಪಿರಿಯಾಪಟ್ಟಣ:25 ಆಗಸ್ಟ್ 2022
ಸತೀಶ್ ಆರಾಧ್ಯ / ನಂದಿನಿ ಮೈಸೂರು
ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ ಎಂದು ರಾವಂದೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಲಕ್ಷ್ಮೀಕಾಂತ್ ಅಭಿಪ್ರಾಯಪಟ್ಟರು.
ತಾಲೂಕಿನ ಬೆಟ್ಟದಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿ.ಸಿ ಟ್ರಸ್ಟ್ ಬೆಟ್ಟದಪುರ ಯೋಜನೆ ಕಚೇರಿ ವತಿಯಿಂದ ನಡೆದ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅಪಾರವಾಗಿದ್ದು ಪ್ರತಿಯೊಬ್ಬರು ಮಾದಕ ವಸ್ತುಗಳ ವ್ಯಸನಿಗಳಾಗದೆ ಅವುಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಿಸಲು ಪಣ ತೊಡಬೇಕು, ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು ಕಲಿಕೆಯತ್ತ ಹೆಚ್ಚು ಆಸಕ್ತಿ ವಹಿಸಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗುವಂತೆ ತಿಳಿಸಿದರು.
ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ಅವರು ಮಾತನಾಡಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸಂಸ್ಥೆಯ ವತಿಯಿಂದ ಶಾಲಾ ಕಾಲೇಜುಗಳಲ್ಲಿ 8ನೇ ತರಗತಿಯಿಂದ ಪ್ರಥಮ ದರ್ಜೆ ವರೆಗಿನ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ವೇಳೆ ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರುವಂತೆ ಪ್ರತಿಜ್ಞಾವಿಧಿ ಬೋಧಿಸಲಾಯಿತು, ಉಪಪ್ರಾಂಶುಪಾಲ ಬಿ.ಎಸ್ ರೇವಣ್ಣ ಅವರು ಮಾತನಾಡಿದರು.
ಈ ಸಂದರ್ಭ ಸಂಸ್ಥೆಯ ಮೇಲ್ವಿಚಾರಕ ಮಂಜುನಾಥ್, ಸೇವಾಪ್ರತಿನಿಧಿ ಪದ್ಮ, ಶಿಕ್ಷಕರಾದ ಆಲನಹಳ್ಳಿ ಕೆಂಪರಾಜು, ನಿಂಗರಾಜು ಇದ್ದರು