ತಲಕಾಡು:15 ಆಗಸ್ಟ್ 2022
ನಂದಿನಿ ಮೈಸೂರು
ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಲ್ಲದೇ ಪ್ರತಿಯೊಂದು ಊರು ಕೇರಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದಲ್ಲಿ ತ್ರಿವರ್ಣ ಧ್ವಜ ರಾರಾಜಿಸುತ್ತಿತ್ತು.
ಡಾಕ್ಟರ್ ವಿಷಕಂಠ ನಾಯಕ ಟಿಎಂ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ವಿತರಣೆ ಮಾಡಿದರು.ಶಾಲಾ ಮಕ್ಕಳು ಸರತಿ ಸಾಲಿನಲ್ಲಿ ನಿಂತು ಸಿಹಿ ಸ್ವೀಕರಿಸಿ ಸಂಭ್ರಮಿಸಿದರು.
ದುರ್ಗಾ ಪ್ರಸಾದ್, ವಸಂತ ಮದನ್, ರಂಗಸ್ವಾಮಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.