ಬೆಂಗಳೂರು:24 ಸೆಪ್ಟೆಂಬರ್ 2021
ನ@ದಿನಿ
ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ, ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಟಾಂಗಾ ಜಾಥಾ ನಡೆಸಿತು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕ್ವಿ ನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಏರಿ ಹೊರಟರು.ಜಾಥಾದಲ್ಲಿ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರರು ಭಾಗಿಯಾಗಿದ್ದರು.