ಮೈಸೂರು:18 ಅಕ್ಟೋಬರ್ 2021
ನ@ದಿನಿ
ಮೈಸೂರು ನಗರ ಜಿಲ್ಲಾ ಕಾಂಗ್ರೇಸ್ ಸಮಿತಿ ಪರಿಶಿಷ್ಟ ಪಂಗಡ ವಿಭಾಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು
ಎಸ್ ಟಿ ವಿಭಾಗದ ನಗರಾಧ್ಯಕ್ಷ
ರೋಹಿತ್.ಎಸ್ ಮಾಹಿತಿ ನೀಡಿದರು.
ಅಕ್ಟೋಬರ್ 20 ರಂದು ಮೈಸೂರಿನ ಪುರ ಭವನದಲ್ಲಿ ನಡೆಯಲಿರುವ ಜಯಂತಿ ಕಾರ್ಯ ಕ್ರಮಕ್ಕೆ ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ 2021ರ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 5 ಮಂದಿ ಕೋರೋನಾ ವಾರಿಯರ್ಸ್ ಗಳಿಗೆ ಸನ್ಮಾನಿಸಲಾಗುವುದು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಯೋಗೇಶ್ ನಾಯಕ,ಸಂಘಟನಾ ಕಾರ್ಯದರ್ಶಿ ಕೆಂಪನಾಯಕ,ರಮೇಶ್ ಜೊತೆಗಿದ್ದರು.