ಮೈಸೂರು:23 ಅಕ್ಟೋಬರ್ 2021
ನಂದಿನಿ
ಮೈಸೂರು ಜಿಲ್ಲಾ ನಾಯಕ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ,ಪ್ರತಿಭಾ ಪುರಸ್ಕಾರ ಮತ್ತು ಕೋರೋನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಮೂಡಾ ಬಳಿ ಇರುವ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ವಾಲ್ಮೀಕಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ದೀಪಬೆಳಗಿಸುವ ಮೂಲಕ ಕೇಂದ್ರ ಪರಿಹಾರ ನಿಗಮ ಮಂಡಳಿ ಅಧ್ಯಕ್ಷ ರಾಮಚಂದ್ರ ಉದ್ಘಾಟಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಕುರಿತು ಉಪ ಆಯುಕ್ತ ಹೆಚ್.ಎಸ್.ಮಂಜುನಾಥ್ ಮುಖ್ಯ ಭಾಷಣ ಮಾಡಿದರು.
ಎಸ್.ಎಸ್ .ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಉತ್ತಮ ಶಿಕ್ಷಕರಿಗೆ ಗೌರವ,ಕೋರೋನಾ ವಾರಿಯರ್ಸ್ ಗಳಿಗೆ ವೇದಿಕೆಯ ಗಣ್ಯರು ಸನ್ಮಾನಿಸಿದರು.
ಎಸ್.ಕೆ.ರಮೇಶ್,ಮಹದೇವ ಮೂರ್ತಿ,ಸಂಘದ ಜಿಲ್ಲಾಧ್ಯಕ್ಷ ನಾಗಲಿಂಗಪ್ಪ, ದ್ಯಾವಪ್ಪನಾಯಕ, ದೇವರಾಜು ಕಾಟೂರು ಸೇರಿದಂತೆ ಸಂಘದ ಸದಸ್ಯರು ಭಾಗಿಯಾಗಿದ್ದರು.