ನಂದಿನಿ ಮೈಸೂರು
ಜ.27 ರಂದು ವರುಣಾ ಕ್ಷೇತ್ರದಲ್ಲಿ ಮಡಿವಾಳರ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮೈಸೂರು ತಾಲೂಕು ವೀರ ಮಡಿವಾಳ ಸಂಘದ ಅಧ್ಯಕ್ಷ ಜಯರಾಮ್ ದುದ್ದಗೆರೆ ತಿಳಿಸಿದರು.
ಮಡಿವಾಳ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಂಜನಗೂಡು ಹಾಗೂ ಟಿ.ನರಸೀಪುರ ಮಧ್ಯೆ ಇರುವ
ಕುಪ್ಪರಹಳ್ಳಿ ಗ್ರಾಮದಲ್ಲಿ
ವರುಣಾ ಕ್ಷೇತ್ರ ಕುಪರಹಳ್ಳಿ ಗ್ರಾಮದಲ್ಲಿ ರಾಜ್ಯಾಧ್ಯಕ್ಷರಾದ ಸಿ. ನಂಜಪ್ಪರವರ ಸಂಪೂರ್ಣ ಸಹಕಾರದೊಂದಿಗೆ ಮಡಿವಾಳರ ಜಾಗೃತಿ ಸಮಾವೇಶವನ್ನು ಏರ್ಪಡಿಸಲಾಗಿದೆ.
ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಲಿದ್ದಾರೆ.ವಿರೋಧ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಡಿವಾಳ ಸಮಾವೇಶ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೆ ರಾಜಕೀಯ ಪಕ್ಷದ ಮುಖಂಡರುಗಳು ಹಾಗೂ ಸಮಾಜದ ಮುಖಂಡರುಗಳು ಭಾಗವಹಿಸಲಿದ್ದಾರೆ. ಆದ್ದರಿಂದ ಈ ಸಮಾರಂಭಕ್ಕೆ ಮೈಸೂರು ಜಿಲ್ಲೆ ಹಾಗೂ ಎಲ್ಲಾ ತಾಲ್ಲೂಕು ಮಡಿವಾಳ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿ ಮಾಡುವಂತೆ ಮನವಿ ಮಾಡಿದರು.