ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದರೆ ನಿರ್ಧಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ:ಡಾ.ಕೆ.ವಿ.ರಾಜೇಂದ್ರ

ನಂದಿನಿ ಮೈಸೂರು

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದರೆ ನಿರ್ಧಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ:ಡಾ.ಕೆ.ವಿ.ರಾಜೇಂದ್ರ

ಮೈಸೂರು):- ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವoತಹ ಯಾವುದೇ ರೀತಿಯ ಚಟುವಟಿಕೆಗಳು ಜಿಲ್ಲೆಯಲ್ಲಿ ಕಂಡು ಬಂದರೆ ನಿರ್ಧಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಸಂಬoಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಮತ್ತು ಚಾಮರಾಜ ವಿಧಾನಸಭಾ ಕ್ಷೇತ್ರಗಳ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸ್ಟಾಟಿಸ್ಟಿಕ್ ಸರ್ವೇಲೆನ್ಸ್ ತಂಡದ ಸದಸ್ಯರುಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಗೆ ನಿಯೋಜನಗೊಂಡಿರುವ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗoತೆ ಎಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ತೆರೆದಿರುವ ಚೆಕ್ ಪೋಸ್ಟ್ಗಳಲ್ಲಿ ಸೂಕ್ಷ್ಮವಾಗಿ ವಾಹನ ತಪಾಸಣೆ ಮಾಡಬೇಕು. ತಪಾಸಣೆ ವೇಳೆ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ತಿಳಿಸಿದರು.

ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ ಅವರು ಮಾತನಾಡಿ, ಇದು ಚುನಾವಣಾ ಹಬ್ಬ. ಸರ್ಕಾರವನ್ನು ರಚನೆ ಮಾಡಲು ನಾಯಕರನ್ನು ಆಯ್ಕೆ ಮಾಡುವ ಚುನಾವಣೆ ಪ್ರಕ್ರಿಯೆಯಲ್ಲಿ ತಾವು ಭಾಗಿಗಳಾಗುತ್ತಿದ್ದೀರಿ ಎಂಬ ಹೆಮ್ಮೆ ಇರಲಿ ಎಂದರು. ತಮಗೆ ಯಾವುದೇ ಗೊಂದಲಗಳಿದ್ದರೆ ರಿಟರ್ನಿಂಗ್ ಆಫೀಸರ್ ಗಳ ಹತ್ತಿರ ಬಗೆಹರಿಸಿಕೊಳ್ಳಿ. ಚರ್ಚ್, ಮಸೀದಿ ಹಾಗೂ ದೇವಸ್ಥಾನಗಳ ಮುಂದೆ ಯಾವುದೇ ರೀತಿ ಪ್ರಚಾರ ಮಾಡುವಂತಿಲ್ಲ. ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮೆರವಣಿಗೆಗೆ, ಸಭೆ ಸಮಾರಂಭಗಳಿಗೆ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ವಿಡಿಯೋ ವ್ಯಾನ್ಗಳಿಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಅನುಮತಿ ಪಡೆದಿರಬೇಕು. ಮತದಾನ ಮುಕ್ತಾಯವಾಗುವ 48 ಗಂಟೆ ಮುಂಚೆ ಬಹಿರಂಗ ಪ್ರಚಾರಗಳು ಅಂತ್ಯವಾಗಬೇಕು. ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಮತ್ತು ಪ್ರಾಣಿಗಳನ್ನು ಬಳಸಿಕೊಳ್ಳುವಂತಿಲ್ಲ ಎಂದು ತಿಳಿಸಿದರು.

ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತರಾದ ಶ್ರೀ ದೇವರಾಜ್ ಅವರು ಮಾತನಾಡಿ, ಚುನಾವಣೆ ಕರ್ತವ್ಯದಲ್ಲಿ ಯಾವುದೇ ಲೋಪಗಳು ಆಗಬಾರದು. ನಾವು ಮಾಡುವ ಕೆಲಸದಲ್ಲಿ ಅರಿವು ಇಲ್ಲದೆ ಇದ್ದಾಗ ಲೋಪಗಳು ಉಂಟಾಗುತ್ತವೆ. ಆದ್ದರಿಂದ ಈ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಅಸಂಖ್ಯಾತ ಬ್ಯಾನರ್ಗಳು, ಮೈಕ್ಗಳಲ್ಲಿ ಪ್ರಚಾರ ಹೆಚ್ಚಾಗಿ ಇರುತ್ತಿತ್ತು, ಆದರೆ ಈಗ ಎಲ್ಲವೂ ನಿಯಮ ಬದ್ಧವಾಗಿ ಅನುಮತಿ ಪಡೆದುಕೊಂಡು ಮಾಡಬೇಕು. ಎಫ್.ಎಸ್.ಟಿ ತಂಡದವರಿಗೆ ತಮ್ಮ ವ್ಯಾಪ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು ಎಂದು ಸೂಚಿಸಿದರು.

ಯಾವುದೇ ಅಧಿಕಾರಿಗಳು ಮತ್ತು ಪಕ್ಷಗಳು ವೈಯಕ್ತಿಕ ಟೀಕೆಗಳನ್ನು ಮಾಡುವಂತಿಲ್ಲ. ಯಾವುದೇ ಸರ್ಕಾರಿ ಕಚೇರಿ ಕಾಂಪೌoಡ್ಗಳ ಮೇಲೆ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅಂಟಿಸುವoತಿಲ್ಲ. ಬಹಿರಂಗ ಸಭೆ/ಸಮಾರಂಭಗಳ ವಿಡಿಯೋ ರೆಕಾರ್ಡಿಂಗ್ ಆಗಬೇಕು. ಬೈಕ್ ರ್ಯಾ ಲಿ ಹಾಗೂ ಕಾರು ರ್ಯಾ ಲಿಗಳಿಗೆ ಬೈಕ್ ಹಾಗೂ ಕಾರುಗಳ ನೋಂದಣಿ ಸಂಖ್ಯೆ ಸಮೇತ ಅನುಮತಿ ಪಡೆದಿರಬೇಕು. ಬೇರೆ ವಾಹನಗಳನ್ನು ಬಳಸಲು ಅವಕಾಶ ಇರುವುದಿಲ್ಲ. ಪೋಸ್ಟರ್ ಮತ್ತು ಪಾಂಪ್ಲೆಟ್ಸ್ಗಳಲ್ಲಿ ಪ್ರಿಂಟರರ್ಸ್ ಮತ್ತು ಪಬ್ಲಿಕೇಷನ್ಸ್ ಹೆಸರು, ವಿಳಾಸ, ಹಾಗೂ ಪ್ರತಿಗಳ ಸಂಖ್ಯೆ ಮುದ್ರಣ ಕಡ್ಡಾಯವಾಗಿರಬೇಕು. ರಾತ್ರಿ 10 ಗಂಟೆಯಿoದ ಬೆಳಗ್ಗೆ 6 ಗಂಟೆಯವರೆಗೆ ಚುನಾವಣೆ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದರು.

ತರಬೇತಿಯಲ್ಲಿ ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕರಾದ ತಂಬಣ್ಣ ಅವರು ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *