ನಂದಿನಿ ಮೈಸೂರು
ಅಭಿಮಾನಿಗಳ ಒತ್ತಾಯದ ಮೇರೆಗೆ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮುಂದಿನ ದಿನಗಳಲ್ಲಿ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಮೈಸೂರು: ಚಲನಚಿತ್ರ ನಟ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮವಾಗಿ ಸ್ಪಂಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೈಸೂರು ನಗರದ ಎಚ್.ಡಿ.ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ (ರಿ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ವಿಷ್ಣುವರ್ಧನ್ ಸ್ಮಾರಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ನೀವೇನು ಪ್ಲೇಕಾಡ್೯ಗಳನ್ನು ಹಿಡಿದಿದ್ದೀರಿ ನಿಮ್ಮ ಭಾವನೆ ನನಗೆ ಅರ್ಥವಾಗಿದೆ. ನಿಮ್ಮ ಬಾವನೆಗಳಿಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂಧಿಸಲಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಾನು ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿಗೆ ಬಂದಿದ್ದೇನೆ. 80 ರ ದಶಕದಲ್ಲಿ ನಾಗರಹಾವು ಚಲನಚಿತ್ರದ ಪೋಸ್ಟರ್ ಪ್ರಜಾಮತ ಪತ್ರಿಕೆಯಲ್ಲಿ ನೋಡಿ ಸಂತೋಷಪಟ್ಟಿದ್ದೆವು. ನಂತರ ವಿಷ್ಣುವರ್ಧನ್ ನಾಗರಹಾವಿನ ಚಿತ್ರ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಎಲ್ಲರೂ ಅವರ ಅಭಿಮಾನಿಗಳಾಗಿದ್ದಾರೆ ಎಂದು ಬಣ್ಣಿಸಿದರು.
ವಿಷ್ಣುವರ್ಧನ್ ಅವರು ಪೌರಾಣಿಕ ಪಾತ್ರ ಸಾಮಾಜಿಕ ಪಾತ್ರ ಸೇರಿದಂತೆ ಹಲವು ಚಿತ್ರಗಳನ್ನು ಮಾಡಿ ಯಾವುದೇ ಪಾತ್ರ ಕೊಟ್ಟರು ಅದಕ್ಕೆ ನೈಜತೆ ತುಂಬಿ ನಟಿಸಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುತ್ತಿದ್ದರು.
ಅವತ್ತಿನ ಮೇರು ನಟಿ ಭಾರತಿ ಅಮ್ಮನವರು ಅವರ ಬಾಳಸಂಗಾತಿಯಾದ ಮೇಲೆ ವಿಷ್ಣುವರ್ಧನ್ ದೊಡ್ಡ ಸಾಧನೆ ಮಾಡಿದರು.ಭಾರತಿ ಅವರ ಬೆನ್ನೆಲುಬಾಗಿ ನಿಂತು ಅವರ ಜೊತೆಗೆ ನಡೆದರು. ಕಡೆ ದಿನಗಳಲ್ಲಿ ವಿಷ್ಣುವರ್ಧನ್ ಆಧ್ಯಾತ್ಮಿಕತೆಗೆ ಒಳಗಾದಲೂ ಅವರು ವಿಷ್ಣುವರ್ಧನ್ ಅವರ ಹಿಂದೆ ನಿಂತುಕೊಂಡರು ಎಂದು ಸ್ಮರಿಸಿದರು.ವಿಷ್ಣುವರ್ಧನ್ ಅವರು ನಿಧನರಾದ ನಂತರ ದೊಡ್ಡ ವಿವಾದ ಉಂಟಾಯಿತು. ಅವರ ಸ್ಮಾರಕ ನಿರ್ಮಾಣಕ್ಕೆ ಗೊಂದಲಗಳುಂಟಾಯಿತು. ಆಗ ಭಾರತಿ ಮತ್ತು ಅನಿರುದ್ಧ್ ಮೈಸೂರಿನಲ್ಲೇ ನಿರ್ಮಾಣ ಮಾಡಲು ತೀರ್ಮಾನ ಮಾಡಿದರು. ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು 11 ಕೋಟಿ ರೂ. ನೀಡಿ ಎಲ್ಲಾ ರೀತಿಯ ಸಹಕಾರ ನೀಡಿದ್ದರು. ಇಂದು ನಾನು ಮುಖ್ಯಮಂತ್ರಿಯಾಗಿ ಉದ್ಘಾಟನೆ ಮಾಡುತ್ತಿರುವುದು ಸಂತೋಷ ತಂದಿದೆ. ಈ ಎಲ್ಲಾ ಕ್ರಿಡಿಟ್ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು ಎಂದು ಹೇಳಿದರು.
ಇನ್ಸ್ಟಿಟ್ಯೂ್ಟ್ ಆಗಬೇಕಿದೆ ಎಂದು ಭಾರತಿ ಹೇಳಿದ್ದಾರೆ. ಅದಕ್ಕೆ ಸರ್ಕಾರ ಸ್ಪಂಧಿಸಲಿದೆ ಎಂದು ಹೇಳಿದರು.
ವಿಷ್ಣುವರ್ಧನ್ ಅವರಿಗೆ ಗೌರವ ತರುವ ರೀತಿ ಸ್ಮಾರಕ ಆಗಿದೆ. ಇಲ್ಲಿ ಆಟ್೯ ಗ್ಯಾಲರಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಇದನ್ನು ಪ್ರವಾಸಿ ತಾಣವಾಗಿ ಮಾಡಿ, ಇಲ್ಲಿ ಸಿನಿಮಾ ನಿರ್ಮಾಣದ ಕೇಂದ್ರ ಆಗಬೇಕು ಅದಕ್ಕೆ ನಮ್ಮ ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದರು.ಭಾರತಿ ಅಮ್ಮನವರು ಫಿಲಿಂ ಇನ್ಸ್ಟಿಟ್ಯೂಟ್ ಆಗಬೇಕೆಂದು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನೂ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಟ ಡಾ. ವಿಷ್ಣುವರ್ಧನ್ ಅವರ ಪತ್ನಿ ನಟಿ ಡಾ.ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್, ಶಾಸಕರುಗಳಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಉಪಸ್ಥಿತರಿದ್ದರು.