ಮೈಸೂರು:28 ಮೇ 2022
ನಂದಿನಿ ಮೈಸೂರು
ಶ್ರೀ ವಿಶ್ವಕರ್ಮ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಆನಂದೂರು ಪುಟ್ಟಸ್ವಾಮಚಾರ್ ,ಮೊಗಣ್ಣಾಚಾರ್ ಮಾಹಿತಿ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು
ಮೈಸೂರು, ಮಂಡ್ಯ,ಚಾಮರಾಜನಗರ ಜಿಲ್ಲೆಯಲ್ಲಿ 2021 -22 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತೀಯ ಪಿಯುಸಿಯಲ್ಲಿ ಶೇ.90%ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿಶ್ವ ಕರ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅಂಕಪಟ್ಟಿ,ಆಧಾರ್ ಕಾರ್ಡ್,ಒಂದು ಫೋಟೋ, ಮೊಬೈಲ್ ಸಂಖ್ಯೆ ಜೊತೆ ಅರ್ಜಿ ಕೊಡಬೇಕು.
ಜುಲೈ 20 ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.ನಮ್ಮ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ತಲುಪಿಸತಕ್ಕದ್ದು.ಸಮುದಾಯದ ಬಡ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಕೆಂಡಗಣ್ಣ ವಿಶ್ವಕರ್ಮ,ಹಾಗೂ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಜೊತೆಗಿದ್ದರು.