ನಂದಿನಿ ಮೈಸೂರು
ಹೆಚ್.ಡಿ.ಕೋಟೆಯಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕ ಜಿ.ಟಿ.ದೇವೇಗೌಡ, ಜೆ.ಡಿ.ಎಸ್. ಮುಖಂಡರಾದ ಜಿ.ಡಿ.ಹರೀಶ್ ಗೌಡರವರನ್ನು ಬೃಹತ್ ಸೇಬಿನ ಹಾರ ಹಾಕುವ ಮೂಲಕ ಜೆ.ಡಿ.ಎಸ್. ಕಾರ್ಯಕರ್ತರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರು, ಜೆ.ಡಿ.ಎಸ್. ಮುಖಂಡರು ಆದ ಚಿಕ್ಕಣ್ಣರವರು, ಯುವ ಮುಖಂಡರಾದ ಜಯಪ್ರಕಾಶ್, ತಾಲ್ಲೂಕು ಜೆ.ಡಿ.ಎಸ್. ಅಧ್ಯಕ್ಷರಾದ ರಾಜೇಂದ್ರ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.