ನಂದಿನಿ ಮೈಸೂರು
ಕಾರ್ತಿಕಾ ಮಾಸ ಹಿನ್ನಲೆ ಶ್ರೀ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ವಿಜಯನಗರ 4 ನೇ ಹಂತದಲ್ಲಿ ಇರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಸಂಸ್ಥಾಪಕರಾದ ಭಾಷ್ಯಂ ಸ್ವಾಮೀಜಿ ಹಾಗೂ ವ್ಯವಸ್ಥಾಪಕರಾದ ಶ್ರೀನಿವಾಸ್ ರವರು ನೇತೃತ್ವದಲ್ಲಿ ದೀಪೋತ್ಸವ ಕಾರ್ಯಕ್ರಮ ಜರುಗಿತು.ನಾಡಿನ ಒಳಿತಿಗಾಗಿ ದೀಪ ಹಚ್ಚಿ ಪ್ರಾರ್ಥಿಸಿದರು.
ಕಾರ್ತಿಕ ಮಾಸ ಸೋಮವಾರದಂದು
ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಹುಣ್ಣಿಮೆಯ ಚಂದ್ರನನ್ನು ನೋಡುತ್ತ ದೇವಸ್ಥಾನದ ಪುರೋಹಿತರು ದೀಪ ಹಚ್ಚುವುದನ್ನು ಕಣ್ತುಂಬಿಕೊಂಡರು.ವ್ಯವಸ್ಥಾಪಕರಾದ ಶ್ರೀನಿವಾಸ್ ರವರು ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ಪ್ರಸಾದ ವಿತರಿಸಿದರು.